ಉಡುಪಿ: ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಸ್ನೇಹಿತರೇ ಕೊಲೆ ಮಾಡಿರುವ ಘಟನೆ ಘಟನೆ ಉಡುಪಿ ಸುಬ್ರಮಣ್ಯನಗರ ಎಂಬಲ್ಲಿ ಆ.12ರಂದು ರಾತ್ರಿ ವೇಳೆ ನಡೆದಿದೆ.
ವೃತರನ್ನು ಸುಬ್ರಮಣ್ಯ ನಗರ ನಿವಾಸಿ ವಿನಯ್ ದೇವಾಡಿಗ, (40) ಎಂದು ಗುರುತಿಸಲಾಗಿದೆ. ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಕೊಲೆ ಆರೋಪಿಗಳಾಗಿದ್ದು ಇವರನ್ನು ಪೊಲೀಸರು ಬಂಧಿಸಿದ್ದಾರೆ.
ವಿನಯ್, ಆರೋಪಿ ಆಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿದ್ದ ಎಂಬ ಕಾರಣಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ.
ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ರವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆಂದು ದೂರಲಾಗಿದೆ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾದರೂ ಎಂದು ತಿಳಿದುಬಂದಿದೆ ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ